ಬಂಟ್ವಾಳ: ವಗ್ಗ ಸಮೀಪದ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ನಡೆದ ನವರಾತ್ರಿ ಪೂಜೆ ಹಾಗೂ ರಂಗಪೂಜೆಯ ಬಳಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ದಾನಿಗಳ ನೆರವಿನಿಂದ ದೇವಸ್ಥಾನದ ನಾಗಸನ್ನಿಧಿ ಬಳಿ ನಿರ್ಮಾಣಗೊಳ್ಳುತ್ತಿರುವ ಭೋಜನಾಲಯಕ್ಕೆ ಶೀಟು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಎಸ್. ಪಂಡಿತ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ, ಸಿದ್ಧಾಪುರ ನೀರಾವರಿ ಇಲಾಖೆಯ ಎಂಜಿನಿಯರ್ ಜಯರಾಮ್ ಕೈತ್ರೋಡಿ, ಭಜನಾ ಮಂಡಳಿ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.




