Breaking
15 Oct 2026, Thu

ಮಡಂತ್ಯಾರು ಬಸ್ ನಿಲ್ದಾಣದ ಮುಂದೆ ಅಕ್ರಮ ಪಾರ್ಕಿಂಗ್ ಕಿರಿಕಿರಿ; ಕ್ರಮಕ್ಕೆ ಸ್ಥಳೀಯರ ಒತ್ತಾಯ

ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಬಸ್ ನಿಲ್ದಾಣದ ಮುಂಭಾಗದಲ್ಲಿ ಆಟೋ ಹಾಗೂ ಖಾಸಗಿ ವಾಹನಗಳ ಅಕ್ರಮ ಪಾರ್ಕಿಂಗ್‌ನಿಂದ ವಿದ್ಯಾರ್ಥಿಗಳು, ಪ್ರಯಾಣಿಕರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಬಸ್ ನಿಲ್ದಾಣದ ಎದುರೇ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಬಸ್‌ಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಪ್ರಯಾಣಿಕರ ಸುಗಮ ಓಡಾಟಕ್ಕೂ ಸಮಸ್ಯೆ ಉಂಟಾಗುತ್ತಿದೆ. ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಬಸ್‌ಗಾಗಿ ಕಾಯುವ ಸಾರ್ವಜನಿಕರು ಕಿರಿಕಿರಿ ಎದುರಿಸುವಂತಾಗಿದೆ.

ಬಸ್ ನಿಲ್ದಾಣದ ಮುಂಭಾಗದಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಗೆ ಕಡಿವಾಣ ಹಾಕಿ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಅಕ್ರಮ ಪಾರ್ಕಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *