ಸಿದ್ಧಕಟ್ಟೆ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ ಹಾಗೂ ಸಂಗಬೆಟ್ಟು ಗ್ರಾಮ ಪಂಚಾಯತ್ನ ಜಂಟಿ ಸಹಯೋಗದಲ್ಲಿ ಸಿದ್ಧಕಟ್ಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ಪರಿಸರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಹರಿಣಾಕ್ಷಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾನಾಯಕ್ ಕಾರ್ಯಕ್ರಮವನ್ನು ಸಂಘಟಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪಂಚಾಯತ್ ಕಾರ್ಯದರ್ಶಿ ರೋಹಿಣಿ ಹಾಗೂ ಪಂಚಾಯತ್ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.




