ಬಂಟ್ವಾಳ: ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರು ವೃತ್ತಿ ನಿಷ್ಠೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಾಮಾಣಿಕ ಸೇವೆ ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ದಾರಿದೀಪ ಆಗುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಸಂಘದ ಸದಸ್ಯರಾದ ದರ್ಣಪ್ಪ ನಾಯ್ಕ ಮತ್ತು ಸುನೀತಾ ಎಂಬವರು ಕುಕ್ಕಿಪಾಡಿ ಗ್ರಾಮ ಪಂಚಾಯತ್ ಲ್ಲಿ ಸೇವೆ ಸಲ್ಲಿಸಿ ಭಡ್ತಿಗೊಂಡು ಕ್ರಮವಾಗಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ, ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಸಲುವಾಗಿ ಸದ್ರಿಯವರನ್ನು ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಸಂಘದ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಗೌರವರ್ಪಣೆ ಸಲ್ಲಿಸಿ ಮಾತಾನಾಡಿದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೋಡುಂಬ, ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಶುಭ ಹಾರೈಸಿದರು.
ವೇದಿಕೆಯಲ್ಲಿ ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಅರ್. ನವೀನ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.



