Breaking
15 Oct 2026, Thu

18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.


ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/2019ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 457 ಮತ್ತು 380ರ ಅಡಿಯಲ್ಲಿ ಆರೋಪಿಯಾಗಿದ್ದ ರಾಮ್ಶೀದ್, ಕಳೆದ 18 ತಿಂಗಳುಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.


ಅಕ್ಟೋಬರ್ 13, 2026ರಂದು ವಿಟ್ಲ ಪೊಲೀಸ್ ಠಾಣೆಯ ಎಎಸ್ಐ ಜಯರಾಮ್ ಮತ್ತು ಸಿಪಿಸಿ 2462 ಶಿವಾನಂದ ಅವರು ಕೇರಳದ ನಿಲಂಬೂರ್ನ ವಂಡೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *