ಬಂಟ್ವಾಳ : ವಗ್ಗ ಕುಲಾಲ ಸಮಾಜ ಸೇವಾ ಸಂಘ ಇದರ ೨೦ನೇ ವರ್ಷದ ವಾರ್ಷಿಕೋತ್ಸವ ಮತ್ತು ವಾರ್ಷಿಕ ಮಹಾಸಭೆ ಫೆಬ್ರವರಿ ೯ರಂದು ಆದಿತ್ಯವಾರ ವಗ್ಗ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಬೆಳಿಗ್ಗೆ ನಡೆಯಲಿದೆ.
ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪುರುಷೋತ್ತಮ ಕುಲಾಲ್ ಹೇರೊಟ್ಟು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ., ಉಡುಪಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ. ದುಗ್ಗಪ್ಪ ಕಜೆಕಾರ್, ಉದ್ಯಮಿ ದಿವಾಕರ ಮೂಲ್ಯ, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರೀಕಾಕ್ಷ ಯು, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಾಜ ಸೇವಕ ಚಂದ್ರಶೇಖರ ಕರಂಬಾರು, ಕಾಸರಗೋಡು ಜಿಲ್ಲಾ ಸಂಘದ ಅಧ್ಯಕ್ಷ ಬಾಬು ಮೂಲ್ಯ ವಾದ್ಯಪಡ್ಪು, ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಕವಿತಾಯಾದವ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಆಲಂಪುರಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ಪ್ರಗತಿಪರ ಕೃಷಿಕ ದೇಜಪ್ಪ ಮೂಲ್ಯ ಉರುಡಾಯಿ, ತುಳು ರಂಗಭೂಮಿ ಕಲಾವಿದೆ ಉಷಾದೇವರಾಜ್ ಕುಲಾಲ್‌ರವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಹೇರೊಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


