ಬಂಟ್ವಾಳ: ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ವಾಸ್ತವ್ಯದ ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ.

ಸೇವಾ ನಿವಾಸಿ ಅಬ್ದುಲ್ ಜಬ್ಬಾರ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯ ಕಟ್ಟಡದ ಕೆಲವು ಭಾಗಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮನೆಗೆ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.




