Breaking
19 Oct 2026, Mon

ರಕ್ತ ವಾಂತಿ ಮಾಡಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥ: ಯುವಕನ ರಕ್ಷಣೆ

ಉಡುಪಿ: ನಗರದ ಚಿಟ್ಪಾಡಿ ಹನುಮಾನ್ ಗ್ಯಾರೇಜ್ಗೆ ತೆರಳುವ ರಸ್ತೆಯ ಬಸ್ ನಿಲ್ದಾಣದಲ್ಲಿ ರಕ್ತ ವಾಂತಿ ಮಾಡಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಬಾಗಲಕೋಟೆ ಮೂಲದ ಶಿವ (23) ಎಂಬ ಯುವಕನನ್ನು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.


ಯುವಕನ ಆರೋಗ್ಯ ಹದಗೆಟ್ಟಿರುವುದನ್ನು ಗಮನಿಸಿದ ನಿತ್ಯಾನಂದ ಒಳಕಾಡು ಅವರು ತಕ್ಷಣ ನೆರವಿಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಯುವಕನ ಕುಟುಂಬದ ಸದಸ್ಯರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *