Breaking
20 Oct 2026, Tue

ಕೊಯಿಲ: 24ನೇ ವರ್ಷದ ಶಾರದೋತ್ಸವಕ್ಕೆ ಚಾಲನೆ

ಬಂಟ್ವಾಳ: ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ವತಿಯಿಂದ ಕೊಯಿಲ ಹನುಮಾನ್ ನಗರದಲ್ಲಿ ಸೋಮವಾರ ಆರಂಭಗೊಂಡ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವಕ್ಕೆ ಪ್ರಗತಿಪರ ಕೃಷಿಕ ವಸಂತ ಗೌಡ ಮುದ್ದಾಜೆ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಎಂ. ದುರ್ಗಾದಾಸ್ ಶೆಟ್ಟಿ ಮಾವಂತೂರು ವಹಿಸಿದ್ದರು. ಶಾರದೋತ್ಸವ ಸಮಿತಿ ಅಧ್ಯಕ್ಷ ದಿನೇಶ ಶೆಟ್ಟಿ ಮಡಂದೂರು, ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ, ಡೊಂಬಯ್ಯ ಅರಳ, ಉಮೇಶ ಅರಳ, ಹರೀಶ ಬಾಡಬೆಟ್ಟು, ರಮಾನಾಥ ರಾಯಿ, ಪ್ರಶಾಂತ ಶೆಟ್ಟಿ ಕೊಯಿಲ, ಹರೀಶ ಆಚಾರ್ಯ, ರಾಘವ ಅಮೀನ್, ಮನೋಹರ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *