Breaking
20 Oct 2026, Tue

ಮಂಜೇಶ್ವರ: ಕಾರು–ಬೈಕ್ ಅಪಘಾತ; ಗಂಭೀರ ಗಾಯಗೊಂಡ ಸವಾರ ಸಾವು

ಮಂಜೇಶ್ವರ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಜೇಶ್ವರದ ವರ್ಕಾಡಿ ಬಳಿ ಸೋಮವಾರ (ಅ.19) ಸಂಜೆ ನಡೆದಿದೆ.


ಮೃತರನ್ನು ಕೊಡ್ಲಮೊಗರು ನಿವಾಸಿ ಮುಹಮ್ಮದ್ ಟಿ. ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *