Breaking
24 Oct 2026, Sat

ಉಳ್ಳಾಲ: ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಳ್ಳಾಲ: ಅಪರಿಚಿತ ವ್ಯಕ್ತಿಯ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ಕೋಟೆಪುರ ಕೋಡಿಯ ನೇತ್ರಾವತಿ ನದಿ ತೀರದ ಕುದುರು ಪ್ರದೇಶದಲ್ಲಿ ಪತ್ತೆಯಾಗಿದೆ.

ನದಿ ತೀರದ ಕುದುರು ಪ್ರದೇಶದಲ್ಲಿ ಮೃತದೇಹ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಮೃತ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಕುರಿತು ಉಳ್ಳಾಲ ಪೊಲೀಸರು ಪ್ರಕರಣದ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *