ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೀರಮಂಗಲದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ. 25ರಂದು ವರದಿಯಾಗಿದೆ.
ಮೃತರನ್ನು ವೀರಮಂಗಲ ನಿವಾಸಿ ಸುಂದರ ಗೌಡ ಅವರ ಪತ್ನಿ ಮಮತಾ (32) ಎಂದು ಗುರುತಿಸಲಾಗಿದೆ.

ಮಮತಾ ಅವರು ಅ. 24ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮಮತಾ ಅವರು ಸುಂದರ ಗೌಡ ಅವರನ್ನು ಕೆಲವು ಸಮಯದ ಹಿಂದಷ್ಟೇ ವಿವಾಹವಾಗಿದ್ದರು ಎನ್ನಲಾಗಿದೆ. ಅವರು ವಿಷ ಸೇವಿಸಲು ಕಾರಣವೇನು ಎಂಬ ಬಗ್ಗೆ ಪೊಲೀಸರು, ಅವರು ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಹೇಳಿಕೆ ದಾಖಲಿಸಿಕೊಂಡಿದ್ದರು.

ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




