Breaking
27 Oct 2026, Tue

ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ; ಸಮಾಜ ಸೇವಕ ಸುನಿಲ್ ಬೈಲಕೆರೆ ಸಾವು

ಉಡುಪಿ: ನಿಟ್ಟೂರಿನ ಗಾಜಿನ ಕಾರ್ಖಾನೆಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಉಡುಪಿಯ ಸಮಾಜ ಸೇವಕ ಹಾಗೂ ಆಟೋರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ.

ಉಡುಪಿಯ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಾಸಿಸುತ್ತಿದ್ದ ಸುನಿಲ್ ಅವರು, ದಿವಂಗತ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಆಪ್ತರಾಗಿದ್ದರು. ಸ್ವಾಮೀಜಿಯವರ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.

ಸುನಿಲ್ ಅವರು ಉಡುಪಿ ನಗರದಲ್ಲಿ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಗರದಲ್ಲಿ ಅಪಘಾತಗಳು ಸಂಭವಿಸಿದಾಗ ಅಥವಾ ಇತರ ತುರ್ತು ಪರಿಸ್ಥಿತಿಗಳು ಎದುರಾದಾಗ ನೆರವಿಗೆ ಧಾವಿಸುತ್ತಿದ್ದರು. ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೆ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದರು.

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಸುನಿಲ್ ಅವರ ನಿಧನಕ್ಕೆ ಸಂತಾಪ ವ್ಯಕ್ತವಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *