Breaking
28 Oct 2026, Wed

ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುವುದರ ಜತೆಗೆ, ಕ್ರೀಡಾಸ್ಫೂರ್ತಿಯ ಮೂಲಕ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನೂ ಕ್ರೀಡೆ ನೀಡುತ್ತದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್. ಗಟ್ಟಿ ಹೇಳಿದರು.

ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತುಂಬೆ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಂಬೆ ವಿದ್ಯಾಸಂಸ್ಥೆ ಹಲವು ಸಾಧನೆಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಜಿ.ಎಸ್. ಹಾಗೂ ಮೂಡ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್ ವಂದಿಸಿದರು. ಬಂಟ್ವಾಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *