Breaking
29 Oct 2026, Thu

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಈ ರಸ್ತೆ ಈ ಭಾಗದ ಜನರ ಸಂಚಾರಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಜನರ ಸುರಕ್ಷತೆ ಹಾಗೂ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಕೂಡಲೇ ಅಗತ್ಯ ಅನುದಾನ ಮಂಜೂರು ಮಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜನರ ಹಿತಾಸಕ್ತಿ ಮತ್ತು ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *