ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಬಂಟ್ವಾಳ – ಮೂಡುಬಿದಿರೆ ನಡುವಿನ ಹದಗೆಟ್ಟ ಮುಖ್ಯ ರಸ್ತೆಗೆ ಮಂಗಳವಾರ ತೇಪೆ ಡಾಂಬರೀಕರಣ ಕಾಮಗಾರಿ ನಡೆಸಲಾಯಿತು.

ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ತೇಪೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.




