Breaking
31 Oct 2026, Sat

ಮಂಗಳೂರು: ರಾಕೇಶ್ ಕೊಲೆ ಪ್ರಕರಣ – ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಪಂಜಿಮೊಗರು ಮಾಲಾಡಿ ರಸ್ತೆಯ ಕಾಲೇಜೊಂದರ ಬಳಿ 2019ರ ಜನವರಿ 3ರಂದು ನಡೆದ ರಾಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಸುನಿಲ್ ಕುಮಾರ್ ಅಲಿಯಾಸ್ ಕೌಟಿ, ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು, ಪ್ರೀತಮ್ ಅಲಿಯಾಸ್ ಅಭಿ ಹಾಗೂ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ ಶಿಕ್ಷೆಗೊಳಗಾದವರು.

ಕಾವೂರು ಠಾಣೆಯ ಅಂದಿನ ಇನ್ಸ್‌ಪೆಕ್ಟರ್ ಕೆ.ಆರ್. ನಾಯ್ಕ್ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಮಾರುತಿ ಕಮಟೆ ಅವರು ತೀರ್ಪು ಪ್ರಕಟಿಸಿದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಮೋತೀಲಾಲ್ ಚೌಧರಿ ವಾದ ಮಂಡಿಸಿದ್ದರು.

ನಾಲ್ವರಿಗೆ ಒಟ್ಟು ₹70 ಸಾವಿರ ದಂಡ ವಿಧಿಸಲಾಗಿದ್ದು, ಅದರಲ್ಲಿ ₹20 ಸಾವಿರವನ್ನು ಸರ್ಕಾರಕ್ಕೆ ಹಾಗೂ ₹50 ಸಾವಿರವನ್ನು ಮೃತ ರಾಕೇಶ್ ಅವರ ತಂದೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *