Breaking
31 Oct 2026, Sat

ಪಾವಗಡದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪಾವಗಡ: ತಾಲ್ಲೂಕಿನ ಕೆ.ಟಿ. ಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಮನ್ನೂರುಹಳ್ಳಿ ಗ್ರಾಮದ, ಚಳ್ಳಕೆರೆ ತಾಲ್ಲೂಕಿನ ನಿವಾಸಿ ಸುದೀಪ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕರಿಯಮ್ಮನಪಾಳ್ಯ ಗ್ರಾಮದ ನಿವಾಸಿ ನಾಗರಾಜು (35) ಅವರು ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಸುಧೀರ್ ಮತ್ತು ಹರೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *