ಬೆಳ್ತಂಗಡಿ: ಬಂದಾರು ಗ್ರಾಮದ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಉದ್ದೇಶದಿಂದ ಕ್ಷೇತ್ರದ ಸಾನಿಧ್ಯ ಗುಣದೋಷ ಪರಿಜ್ಞಾನಾರ್ಥವಾಗಿ ಅಕ್ಟೋಬರ್ 30ರಿಂದ ನವೆಂಬರ್ 1ರವರೆಗೆ ಅಷ್ಟಮಂಗಳ ಪ್ರಶ್ನಾಚಿಂತನೆ ನಡೆಯುತ್ತಿದೆ.

ಕ್ಷೇತ್ರದ ತಂತ್ರಿಗಳಾದ ವೇ.ಮೂ. ಸೀತಾರಾಮ ಮುಚ್ಚಿಂತ್ತಾಯ ಅವರ ನೇತೃತ್ವದಲ್ಲಿ ಖ್ಯಾತ ಜ್ಯೋತಿಷಿ ಕಟಪಾಡಿ ಪ್ರವೀಣ್ ತಂತ್ರಿ ಅವರಿಂದ ಪ್ರಶ್ನಾಚಿಂತನೆ ನೆರವೇರುತ್ತಿದೆ. ಅಕ್ಟೋಬರ್ 30ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅನುವಂಶಿಕ ಮೊಕ್ತೇಸರರು, ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ (ರಿ.) ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಪದಾಧಿಕಾರಿಗಳು, ಊರಿನ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅರ್ಚಕರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


