ಕಲ್ಲಡ್ಕ : ಕನ್ನಡ ಭಾಷೆಯ ಬೆಳವಣಿಗೆ ಮತ್ತು ಅಭಿಮಾನದ ಜೊತೆಗೆ ಇತರ ಭಾಷೆಗಳ ಬಗ್ಗೆ ಗೌರವವನ್ನು ಹೊಂದಿರುವುದು ಅತಿ ಮುಖ್ಯ, ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ನಮಗೆ ಪ್ರೀತಿ ಹಾಗೂ ಗೌರವ ಭಾವನೆ ಹೊಂದಿರುವುದು ನಮ್ಮ ಕರ್ತವ್ಯವಾಗಿದೆ ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಸಹ ಶಿಕ್ಷಕರಾದ ತೌಸೀಬ್ ಅಹಮದ್ ರವರು ಹೇಳಿದರು.

ಅವರು ನಂವೆಬರ್ 1 ರವಿವಾರ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಜಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಚಿನ್ನಾ ಮೈರಾ, ಶಾಲಾ ಮುಖ್ಯ ಶಿಕ್ಷಕಿ. ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ, ಶಾಲಾ ನಾಯಕ. ಮೊಹಮ್ಮದ್ ಫರ್ಹಾನ್ ,ಶಾಲಾ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಭಾಗವಹಿಸಿದ್ದರು.
ಶಿಕ್ಷಕಿ ಸಂಗೀತ ಶರ್ಮ ಸ್ವಾಗತಿಸಿ, ಶಿಕ್ಷಕಿ ಸುಪ್ರಿಯಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಕಾರ್ಯಕ್ರಮ ನಿರೂಪಿಸಿದರು


