ಮೂಡಬಿದ್ರೆ : ಪುಚ್ಛಮೊಗರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದುಕೊಂಡು ಸರಕಾರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಶಾಲೆಗೆ ವಿನಿಯೋಗಿಸಿಕೊಂಡು, ದಾನಿಗಳ ಸಹಕಾರದಿಂದ ಶಾಲೆಯನ್ನು ಮೇಲ್ದರ್ಜೆಗೆ ಕೊಂಡೊಯ್ಯುವಲ್ಲಿ ಶ್ರಮಿಸಿದ ಮಹಮ್ಮದ್ ಝೂಬಿ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಸೇವೆಗಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆ ಇತರರಿಗೆ ಪ್ರೇರಣೆಯಾಗಿದ್ದು, ಶಿಕ್ಷಣಕ್ಕೆ ಮಹತ್ವವನ್ನು ನೀಡಿ ಶ್ರಮಿಸಿದ ಅವರ ಕೊಡುಗೆ ಶ್ಲಾಘನೀಯವಾಗಿದೆ.
ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರಿಗೆ ವಿವಿಧ ಗಣ್ಯರು, ಹಿತೈಷಿಗಳು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಮಕ್ಕಳು ಹಾಗೂ ಬಂಧುಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.




