Breaking
2 Nov 2026, Mon

ಬಂದಾರಿನಲ್ಲಿ 24ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಬಂದಾರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ಯುವಕ ಮಂಡಲದ ಆಶ್ರಯದಲ್ಲಿ ಆಯೋಜಿಸಲಾದ 24ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ನ. 1ರಂದು ಚಾಲನೆ ನೀಡಲಾಯಿತು.

ಬಾಲಂಪಾಡಿ ತರವಾಡು ಮನೆಯ ಉಮೇಶ್ ಗೌಡ ಅವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಪಾರೊಟ್ಟು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ., ಸಹಶಿಕ್ಷಕ ಮಹೇಶ್, ಯುವಕ ಮಂಡಲದ ಕಾರ್ಯದರ್ಶಿ ಸಂಪತ್ ಕರ್ಲೋಡಿ, ಮಾಜಿ ಅಧ್ಯಕ್ಷರಾದ ದಿವಾಕರ ಗೌಡ ಬಾಲಂಪಾಡಿ, ಲೋಹಿತ್ ಗೌಡ ಸೋಣಕುಮೇರು, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕ ಲೋಕ್ಷಾತ್ ಗೌಡ ಅನಿಲ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಮತ್ತು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

ಕ್ರೀಡಾಕೂಟದ ಅಂಗವಾಗಿ ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಗೋಣಿಚೀಲ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಹಾಗೂ ಸಂಗೀತ ಕುರ್ಚಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 50 ವರ್ಷ ಮೇಲ್ಪಟ್ಟವರಿಗೆ ತೆಂಗಿನಕಾಯಿ ಎಸೆಯುವ ಸ್ಪರ್ಧೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಠಲ್ ಒಳಗುಡ್ಡೆ ಕಾರ್ಯಕ್ರಮ ನಿರೂಪಿಸಿ, ಸತೀಶ್ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *