Breaking
3 Nov 2026, Tue

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

ಪುತ್ತೂರು: ಮೈ ಭಾರತ್ ದಕ್ಷಿಣ ಕನ್ನಡ, ಟೀಮ್ ದಕ್ಷಿಣ ಕಾಶಿ (ರಿ.) ಉಪ್ಪಿನಂಗಡಿ ಹಾಗೂ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಅಕ್ಟೋಬರ್ 31ರಂದು ಪುತ್ತೂರು ವಿದ್ಯಾಮಾತಾ ಅಕಾಡೆಮಿಯಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ, ಸರ್ದಾರ್ ವಲ್ಲಭಭಾಯಿ ಪಟೇಲರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇಂದಿನ ವಾಟ್ಸಾಪ್, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳ ಯುಗದಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಜನರನ್ನು ಒಗ್ಗೂಡಿಸುವುದು ಸವಾಲಿನ ಕೆಲಸವಾಗಿದೆ. ಆದರೆ, ಸರ್ದಾರ್ ವಲ್ಲಭಭಾಯಿ ಪಟೇಲರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಹಲವು ಸಂಘಟನೆಗಳನ್ನು ಒಗ್ಗೂಡಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರು ಎಂದು ಅವರು ಸ್ಮರಿಸಿದರು.

ವಿದ್ಯಾಮಾತಾ ಅಕಾಡೆಮಿಯ ಉಪನ್ಯಾಸಕ ಚಂದ್ರಕಾಂತ್ ಸ್ವಾಗತಿಸಿದರು. ಸಂಸ್ಥೆಯ ವಿದ್ಯಾರ್ಥಿನಿ ನೇಹಾ ರಾವ್ ಕೆ. ಅವರು ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಹಾಗೂ ತರಬೇತುದಾರ ಗಣೇಶ್ ಉಪಸ್ಥಿತರಿದ್ದರು. ಟೀಮ್ ದಕ್ಷಿಣ ಕಾಶಿಯ ಜೊತೆ ಕಾರ್ಯದರ್ಶಿ ವಿಜೇತ್ ಕುಮಾರ್ ವಂದಿಸಿದರು.

Leave a Reply

Your email address will not be published. Required fields are marked *