ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಅವರನ್ನು ಉಡುಪಿಗೆ ಕರೆತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದ್ದು, ಸುರಕ್ಷಿತವಾಗಿ ಉಡುಪಿಗೆ ಕರೆತರಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಔಪಚಾರಿಕ ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.






