Breaking
4 Nov 2026, Wed

ವೇಣೂರು: ಆಟೋ ರಿಕ್ಷಾ-ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಳ್ತಂಗಡಿ: ಆಟೋರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನ.3ರಂದು ಸಂಜೆ ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನಡೆದಿದೆ.

ಮೃತರನ್ನು ಪೆರಾಡಿ ಗ್ರಾಮದ ಸ್ವಸ್ತಿಕ್ (26) ಎಂದು ಗುರುತಿಸಲಾಗಿದೆ. ಇವರು ವೇಣೂರಿನ ಚಿನ್ನದ ಮಳಿಗೆಯೊಂದರಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆಟೋರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ವಸ್ತಿಕ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *