ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಹಲವು ಜನಪರ ಯೋಜನೆಗಳನ್ನು ಮೊಟಕುಗೊಳಿಸುವ ಮೂಲಕ ಜನರನ್ನು ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಸಿದ್ಧಕಟ್ಟೆಯಲ್ಲಿ ಮಂಗಳವಾರ ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸ್ಟಿಂಗ್ ಆಪರೇಷನ್ನಲ್ಲಿ ಸಿಲುಕಿಸಿರುವುದು ದೊಡ್ಡ ದುರಂತ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಉಪಾಧ್ಯಕ್ಷ ವಸಂತ ಕುಮಾರ್ ಅಣ್ಣಳಿಕೆ, ಯುವ ಮೋರ್ಚಾ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದಾರ್, ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ರಾಯಿ, ಸಿದ್ಧಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ಧಕಟ್ಟೆ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ರಾಜೇಶ್ ಶೆಟ್ಟಿ ಕೊನೆರೊಟ್ಟು ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅರ್ಕಕೀರ್ತಿ ಇಂದ್ರ, ಸುರೇಶ್ ಕುಲಾಲ್, ಸುನೀಲ್ ಶೆಟ್ಟಿಗಾರ್, ದಾಮೋದರ ಪೂಜಾರಿ, ಉದಯ ಪೂಜಾರಿ, ದೀಪಕ್ ಶೆಟ್ಟಿಗಾರ್, ವಿಮಲಾ ಮೋಹನ್, ವಿದ್ಯಾ ಪ್ರಭು, ಗುಲಾಬಿ ಶೆಟ್ಟಿ, ಇಂದಿರಾ, ನವೀನ ಹೆಗ್ಡೆ, ತೇಜಸ್ ಕರ್ಪೆ, ಹರೀಶ್ ಆಚಾರ್ಯ ರಾಯಿ, ಚಂದ್ರಶೇಖರ ಕರ್ಪೆ, ಮಾಧವ ಶೆಟ್ಟಿಗಾರ್, ದೇವರಾಜ್ ಸಾಲಿಯಾನ್, ಗಣೇಶ್ ಪೂಜಾರಿ, ಭೋಜ ಶೆಟ್ಟಿಗಾರ್, ಲಿಂಗಪ್ಪ ಪೂಜಾರಿ ಹಲಾಯಿ, ರಾಜೇಂದ್ರ ಕರ್ಪೆ, ಭಾಸ್ಕರ ಪ್ರಭು, ರಾಮಕೃಷ್ಣ ನಾಯಕ್, ವಿನೋದ್ ಅಡಪ, ನಾರಾಯಣ ಹೆಗ್ಡೆ, ಕೃಷ್ಣಪ್ಪ ಪೂಜಾರಿ ಕರ್ಪೆ, ಉದಯ ಕರ್ಪೆ ಮತ್ತಿತರರು ಉಪಸ್ಥಿತರಿದ್ದರು.


