ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಬಂಟ್ವಾಳ ವತಿಯಿಂದ ಮಧು ಮಿತ್ರರಿಗೆ ಆಯೋಜಿಸಲಾಗಿರುವ ಎರಡು ದಿನಗಳ ಜೇನು ಕೃಷಿ ತರಬೇತಿ ಕಾರ್ಯಾಗಾರವು ನವೆಂಬರ್ 4ರಂದು ವೀರಕಂಭ ಗ್ರಾಮದ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನಿಡಿಕ್ಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೈತರು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಉತ್ತಮ ಜೇನು ಕೃಷಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ, ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ಬಂಟ್ವಾಳ ತಾಲೂಕು ಜೇನು ವ್ಯವಸಾಯ ಸಂಘದ ಅಧ್ಯಕ್ಷ ಮೋಹನ್ ಪಿ.ಎಸ್., ವೀರಕಂಭ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮಾ ಹಾಗೂ ಜೇನು ಕೃಷಿ ಜಿಲ್ಲಾ ತರಬೇತುದಾರ ರಾಧಾಕೃಷ್ಣ ಉಪಸ್ಥಿತರಿದ್ದರು.

ಎರಡು ದಿನಗಳ ಈ ತರಬೇತಿ ಕಾರ್ಯಾಗಾರದಲ್ಲಿ ವೀರಕಂಭ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 40 ಮಂದಿ ಆಸಕ್ತ ಕೃಷಿಕರು ಭಾಗವಹಿಸಿದ್ದರು.






