ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 22 ಬಹುಮಾನಗಳನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಶಾಲೆಗೆ ಹೆಮ್ಮೆ ತಂದಿದ್ದು, ಸ್ಪರ್ಧೆಯಲ್ಲಿ ಗಮನ ಸೆಳೆದಿದ್ದಾರೆ.






