Breaking
5 Nov 2026, Thu

ಮಂಗಳೂರು: ಅಕ್ರಮವಾಗಿ ಗೋವುಗಳ ಸಾಗಾಟ – 16 ಗೋವುಗಳ ರಕ್ಷಣೆ, ಲಾರಿ ಚಾಲಕ ಬಂಧನ

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪಣಂಬೂರು ಪೊಲೀಸರು ಬೈಕಂಪಾಡಿ ಬಳಿ ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ನ.4ರ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ.


ಬೆಳಗಾವಿಯಿಂದ ಕಾಸರಗೋಡಿಗೆ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬೈಕಂಪಾಡಿ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಪರವಾನಗಿ ಇಲ್ಲದೆ 16 ಗೋವುಗಳನ್ನು ಲಾರಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 16 ಗೋವುಗಳನ್ನು ವಶಕ್ಕೆ ಪಡೆದುಕೊಂಡು, ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಶಪಡಿಸಿಕೊಂಡ ಗೋವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.


ಗೋವುಗಳ ಅಕ್ರಮ ಸಾಗಾಟದ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆಯೇ? ಈ ಕೃತ್ಯದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *