ಕಲ್ಲಡ್ಕ: ಮಕ್ಕಳ ಶಾರೀರಿಕ ಬಲವರ್ಧನೆ, ಶಿಸ್ತು ಹಾಗೂ ಸಂಯಮ ಬೆಳೆಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಾಜಿ ಶಾಸಕ ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಹೇಳಿದರು.
ನ. 5ರ ಗುರುವಾರ ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 17ರ ವಯೋಮಿತಿಯ ಬಾಲಕ-ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್, ಉದ್ಯಮಿ ಆನಂದ ಆಳ್ವ, ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಗಣೇಶ್ ನೆಟ್ಲ, ಮಜಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬೆನಡಿಕ್ಟ ಮೆಂಡೋನ್ಸ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ವಿ., ಬಂಟ್ವಾಳ ತಾಲೂಕು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ಜಿಲ್ಲಾ ಉಪಾಧ್ಯಕ್ಷ ನವೀನ್ ಪಿ.ಎಸ್., ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಇಂದುಶೇಖರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಚಿನ್ನಪ್ಪ, ಶಾಲೆಯ ನಿವೃತ್ತ ಶಿಕ್ಷಕ ನಾರಾಯಣಗೌಡ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಮೋನಪ್ಪ ದೇವಸ್ಯ, ಬಾಲಕೃಷ್ಣ ಕೊಟ್ಟಾರಿ, ನಾಗೇಶ್ ಪೂಜಾರಿ, ಪದ್ಮನಾಭ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಎಂ. ಸ್ವಾಗತಿಸಿದರು. ಕಲ್ಲಡ್ಕ ವಲಯ ಕ್ರೀಡಾಕೂಟಗಳ ನೋಡಲ್ ಅಧಿಕಾರಿ ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶಂಕರ್ ವಿ. ಪಾವಸ್ಕರ್ ವಂದಿಸಿದರು. ಶಿಕ್ಷಕಿ ಸುನಿತಾ ಬಿ. ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಟಿ. ಹಾಗೂ ಇತರ ಶಿಕ್ಷಕರು ಸಹಕರಿಸಿದರು.





