Breaking
6 Nov 2026, Fri

ತುಳುವರಿಗೆ ಕನ್ನಡ ದೊಡ್ಡಮ್ಮ ಭಾಷೆ: ಜಯಾನಂದ ಪೆರಾಜೆ

ಬಂಟ್ವಾಳ: ಶ್ರೀರಾಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವತಿಯಿಂದ ಮಧುಕರ ಸಭಾಂಗಣದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿಣಿ ಸದಸ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ, ಅತಿಥಿ ಉಪನ್ಯಾಸಕ ಜಯಾನಂದ ಪೆರಾಜೆ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕರ್ನಾಟಕ ಏಕೀಕರಣದ ಇತಿಹಾಸ ಹಾಗೂ ಕನ್ನಡ ಭಾಷೆಯ ಮಹತ್ವದ ಕುರಿತು ಮಾತನಾಡಿದ ಅವರು, ತುಳುವರಿಗೆ ಕನ್ನಡ ದೊಡ್ಡಮ್ಮ ಭಾಷೆಯಿದ್ದಂತೆ ಎಂದು ಬಣ್ಣಿಸಿದರು. ಕನ್ನಡ ಭಾಷೆ ಮತ್ತು ನಾಡಿನ ಸಂಸ್ಕೃತಿಯನ್ನು ಗೌರವಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ಮುಖ್ಯಗುರು ಗೋಪಾಲ ಶ್ರೀಮಾನ್ ಉಪಸ್ಥಿತರಿದ್ದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Leave a Reply

Your email address will not be published. Required fields are marked *