Breaking
12 Nov 2026, Thu

ಸಾರ್ವಜನಿಕ ಪರ್ಬದ ಲೇಸ್–2026ರ ಥ್ರೋಬಾಲ್ ಪಂದ್ಯಾಟ: ಎಲ್.ಸಿ.ಆರ್. ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

ಕಕ್ಯಪದವು: ಉಳಿ ಗ್ರಾಮದ ಶ್ರೀ ರಾಮಾಂಜನೇಯ ಗೆಳೆಯರ ಬಳಗ (ರಿ.), ಮೈರ ಇವರ ವತಿಯಿಂದ ನ. 8ರಂದು ಆಯೋಜಿಸಲಾದ 9ನೇ ವರ್ಷದ ಸಾರ್ವಜನಿಕ ಪರ್ಬದ ಲೇಸ್–2026ರ ಅಂಗವಾಗಿ ನಡೆದ ಥ್ರೋಬಾಲ್ ಪಂದ್ಯಾಟದಲ್ಲಿ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದೆ.

ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ತಂಡದ ಗೆಲುವಿಗೆ ಕಾರಣರಾಗಿ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪೃಥ್ವಿರಾಜ್ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದರು.

Leave a Reply

Your email address will not be published. Required fields are marked *