Breaking
11 Nov 2026, Wed

ಕಲ್ಲಡ್ಕದ ಸೂರಿಕುಮೇರು ಜಂಕ್ಷನ್ನಲ್ಲಿ ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ದಿವ್ಯಾಂಗ ಪಾದಚಾರಿ ಸಾವು

ಕಲ್ಲಡ್ಕ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ನಡೆದಿದೆ.


ಮೃತರನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ, ಕೂಲಿ ಕಾರ್ಮಿಕ ಪುರುಷೋತ್ತಮ ಪೂಜಾರಿ (38) ಎಂದು ಗುರುತಿಸಲಾಗಿದೆ.
ಪುರುಷೋತ್ತಮ ಪೂಜಾರಿಯವರು ಸೂರಿಕುಮೇರು ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಪಘಾತದ ಬಳಿಕ ಪರಾರಿಯಾಗಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *