Breaking
12 Nov 2026, Thu

ದ ಕ ಜಿ ಪಂ ಉ ಹಿ ಪ್ರಾ ಶಾಲೆ ಮಂಕುಡೆಗೆ ಎಂ ಆರ್ ಪಿ ಎಲ್, ಅನುದಾನದಲ್ಲಿ ನಿರ್ಮಿಸಿದ ನೂತನ ಎರಡು ಕೊಠಡಿಗಳು ಮತ್ತು ಶೌಚಾಲಯಗಳ ಉದ್ಘಾಟನಾ ಕಾರ್ಯಕ್ರಮ

ವಿಟ್ಲ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಊರಿನವರ ಮೇಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ನ. 9ರಂದು ಮಂಕುಡೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಆರ್ಪಿಎಲ್ನ ಸಿಎಸ್ಆರ್ ಅನುದಾನದಲ್ಲಿ ನಿರ್ಮಿಸಲಾದ ನೂತನ ಎರಡು ಕೊಠಡಿಗಳು ಹಾಗೂ ಶೌಚಾಲಯಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.


ಸಮುದಾಯದ ಸಹಕಾರ ಮತ್ತು ಪ್ರೋತ್ಸಾಹದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ. ಆದ್ದರಿಂದ ಎಲ್ಲರೂ ಕೈಜೋಡಿಸಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.


ಕಾರ್ಯಕ್ರಮದಲ್ಲಿ ಕಟ್ಟಡ ಗುತ್ತಿಗೆದಾರ ಅಖಿಲ್ ರೈ, ಪ್ರಮುಖರಾದ ಅಭಿಷೇಕ್ ರೈ, ಹರೀಶ್ ಟೈಲರ್, ರಾಜಾರಾಮ ಹೆಗ್ಡೆ, ಶಶಿಕಲಾ, ನತಾಲಿಯ, ಕೃಷ್ಣಪ್ಪ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಆಚಾರಿ, ಉಪಾಧ್ಯಕ್ಷೆ ಸುಪ್ರೀತ, ಲಕ್ಷ್ಮೀನಾರಾಯಣ ಅಡ್ಯಂತಾಯ, ಮುಖ್ಯ ಶಿಕ್ಷಕಿ ಜೆಸಿಂತ ಡಿ’ಸಿಲ್ವ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಶಾಲಾಭಿಮಾನಿಗಳು, ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *