ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಂಘದ ನಿರ್ದೇಶಕರೂ, ಸ್ಥಳೀಯರಾದ ಸದಾಶಿವ ಜೋಗಿ ಅವರು ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಅನ್ನದಾನದ ವ್ಯವಸ್ಥೆ ಮಾಡಿದರು.

ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಿಹಿತಿಂಡಿ ಹಾಗೂ ಪಟಾಕಿಗಳನ್ನು ನೀಡಿ ಹಬ್ಬದ ಸಂಭ್ರಮಕ್ಕೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ದಾನಿಗಳು, ಪಾಲನಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪರಸ್ಪರ ಸಂತಸ ಹಂಚಿಕೊಳ್ಳುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.




