ಬಂಟ್ವಾಳ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರುದ್ಧ ಹಾಗೂ ಮುಖ್ಯ ಚುನಾವಣಾಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯದ ವತಿಯಿಂದ ಶುಕ್ರವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು.

ದೇಶದಾದ್ಯಂತ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ನಿರ್ದೇಶನದಂತೆ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು. ಬಂಟ್ವಾಳ ವಲಯಾಧ್ಯಕ್ಷ ಟಿ.ಎಂ. ಹನೀಫ್ ಉಸ್ತಾದ್ ತಾಳಿಪಡ್ಪು ಅವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಸಾಮಾಜಿಕ ಕಾರ್ಯಕರ್ತ ಸುಧೀರ್ ಕುಮಾರ್ ಮರೋಳಿ, ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಉವೈಸ್ ಮದನಿ ಅಲ್ ಅಝ್‌ಅರಿ ತೋಕೆ, ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಮಿತ್ತಬೈಲ್ ಎಂ.ಜೆ.ಎಂ. ಖತೀಬ್ ಸಯ್ಯಿದ್ ಬಾಶಿತ್ ಬಅಲವಿ ತಂಙಳ್ ಅಲ್ ಅನ್ಸಾರಿ ಮಾತನಾಡಿದರು.

ಮಿತ್ತಬೈಲ್ ಮಸೀದಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಕೋಶಾಧಿಕಾರಿ ಉಬೈದುಲ್ಲಾ ಹಾಜಿ, ಕೇಂದ್ರ ಸಮಿತಿ ಸದಸ್ಯ ಇಸ್ಮಾಯಿಲ್ ಯಮಾನಿ, ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹನೀಫ್ ಧೂಮಳಿಕೆ, ಬಂಟ್ವಾಳ ವಲಯ ಉಸ್ತುವಾರಿ ಅಶ್ರೂರ್ ಮಲಿಕ್, ದ.ಕ. ವೆಸ್ಟ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮುಸ್ತಫಾ ಕಟ್ಟದಪಡ್ಪು, ಜೊತೆ ಕಾರ್ಯದರ್ಶಿ ಇಮ್ರಾನ್ ಮುಜಿಲೋಡಿ ಹಾಗೂ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಶಾಂತಿ ಅಂಗಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಬಳಿಕ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಶಾಂತಿಅಂಗಡಿ ಸ್ವಾಗತಿಸಿ, ವರ್ಕಿಂಗ್ ಕಾರ್ಯದರ್ಶಿ ಉವೈಸ್ ಬಾಂಬಿಲ ವಂದಿಸಿದರು. ಸದಸ್ಯ ಖಲಂದರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.





