Breaking
16 Nov 2026, Mon

ಕಕ್ಕಿಂಜೆಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಮುಖ್ಯ ಪೇಟೆಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು. ವಿಶೇಷ ಕಾಲ್ನಡಿಗೆ ಜಾಥಾದ ಮೂಲಕ ನಡೆದ ಪ್ರತಿಭಟನೆಯಲ್ಲಿ ನೂರಾರು ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಪ್ರತಿಭಟನೆಯ ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು, ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಸರ್ಕಾರದ ಜನವಿರೋಧಿ ಆಡಳಿತ ನೀತಿಗಳನ್ನು ಎಳೆಎಳೆಯಾಗಿ ವಿವರಿಸಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಸಹಪ್ರಭಾರಿಗಳಾದ ಜಯಂತ್ ಕೋಟ್ಯಾನ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಚರಿತ ಭಟ್, ಉಜಿರೆ ಮಹಾಶಕ್ತಿ ಕೇಂದ್ರದ ಯಶವಂತ್ ಗೌಡ ಪುದುವೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ್, ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ಸೀತಾರಾಮ್ ಬೆಳಾಲ್, ಸಹಕಾರ ಸಂಘದ ಪ್ರಕಾಶ್ ನಾರಾಯಣ ರಾವ್, ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಪ್ರಭಾರಿ ಚನ್ನಕೇಶವ, ಶಕ್ತಿ ಕೇಂದ್ರದ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು. ದಿವಿನೇಶ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *