Breaking
16 Nov 2026, Mon

ನರಿಕೊಂಬು ನಾಟಿ ಸರ್ಕಾರಿ ಶಾಲೆಯಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನಿಂದ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ಬಂಟ್ವಾಳ ವಲಯದ ವತಿಯಿಂದ ನರಿಕೊಂಬು ನಾಟಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಪ್ರಯುಕ್ತ ಒಂದರಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್ ಉದ್ಘಾಟಿಸಿದರು. ವಲಯದ ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಕೃಷ್ಣರಾಜ್ ರಾವ್ ಸ್ವಾಗತಿಸಿದರು. ರವಿ ಕಲ್ಪನೆ ವಂದಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ವಲಯದ ಮಾಜಿ ಅಧ್ಯಕ್ಷರಾದ ದಯಾನಂದ್ ಬಂಟ್ವಾಳ್, ಆನಂದ್ ಎನ್., ಉಪಾಧ್ಯಕ್ಷರಾದ ಹರೀಶ್ ನಾಟಿ, ವಿಠ್ಠಲ್ ಕೋಟ್ಯಾನ್, ಮಾಜಿ ಪಂಚಾಯತ್ ಅಧ್ಯಕ್ಷ ಕಿಶೋರ್ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *