Breaking
16 Nov 2026, Mon

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಡಗಕಜೆಕಾರು–ತೆಂಕಕಜೆಕಾರು ಬಿಜೆಪಿ ಶಕ್ತಿ ಕೇಂದ್ರದಿಂದ ಪ್ರತಿಭಟನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಬಡಗಕಜೆಕಾರು–ತೆಂಕಕಜೆಕಾರು ಶಕ್ತಿ ಕೇಂದ್ರದ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಡಗಕಜೆಕಾರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ಸುದರ್ಶನ್ ಬಜ ಅವರು ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಬೆಲೆ ಏರಿಕೆಯಿಂದ ಜನಸಾಮಾನ್ಯರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ವಿವರಿಸಿದರು. ಸರ್ಕಾರದ ಜನವಿರೋಧಿ ನೀತಿಗಳಿಂದ ಸಾಮಾನ್ಯ ಜನರ ಜೀವನದ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ರಾಮನಗರ, ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಗ್ರಾಮ ಪಂಚಾಯತ್ ಸದಸ್ಯರು, ಸಹಕಾರಿ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಬಿಜೆಪಿ ಪ್ರಮುಖರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರತಿಭಟನೆಯ ಬಳಿಕ ಗ್ರಾಮ ಪಂಚಾಯತ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಯಶವಂತ ಕೊಡಿಯಲು ಸ್ವಾಗತಿಸಿದರು. ದೇವದಾಸ್ ಕಜೆಕಾರ್ ವಂದಿಸಿದರು.

Leave a Reply

Your email address will not be published. Required fields are marked *