Breaking
16 Nov 2026, Mon

ಪರಿಷ್ಕೃತ ಕನಿಷ್ಠ ವೇತನ ಪಾವತಿಗೆ ಹೊರಗುತ್ತಿಗೆ ನೌಕರರ ಆಗ್ರಹ

ಬಂಟ್ವಾಳ: ಕಾರ್ಮಿಕ ಇಲಾಖೆಯ ಅಧಿಸೂಚನೆಯಂತೆ ಪರಿಷ್ಕೃತ ಕನಿಷ್ಠ ವೇತನವನ್ನು ಪಾವತಿಸುವಂತೆ ಬಂಟ್ವಾಳ ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಆಗ್ರಹಿಸಿದ್ದಾರೆ.

ಈ ಕುರಿತು ನವೆಂಬರ್ 16ರಂದು ಬಂಟ್ವಾಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ವಾಹನ ಚಾಲಕರು ಹಾಗೂ ಗ್ರೂಪ್ ಡಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಾರ್ಮಿಕ ಇಲಾಖೆಯ ಪರಿಷ್ಕೃತ ಕನಿಷ್ಠ ವೇತನ ಪಾವತಿಯಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಕನಿಷ್ಠ ವೇತನ ಪರಿಷ್ಕರಣೆಯಾಗಿದ್ದರೂ, ನೌಕರರಿಗೆ ಹಳೆಯ ವೇತನವನ್ನೇ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳೆಯ ವೇತನದಲ್ಲಿ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇದರಿಂದ ಹೊರಗುತ್ತಿಗೆ ನೌಕರರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಆದ್ದರಿಂದ ಕಾರ್ಮಿಕ ಇಲಾಖೆಯ ಅಧಿಸೂಚನೆ ಹಾಗೂ ಸರ್ಕಾರದ ಆದೇಶದಂತೆ ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೊರಗುತ್ತಿಗೆ ನೌಕರರು ಮನವಿ ಮೂಲಕ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *