Breaking
20 Nov 2026, Fri

ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಎನ್‌ಎಸ್‌ಎಸ್ ಘಟಕಕ್ಕೆ ಉಳಿ ಸೇವಾ ಸಹಕಾರಿ ಬ್ಯಾಂಕ್‌ನಿಂದ ಹಾರೆ ಕೊಡುಗೆ

ಕಕ್ಯಪದವು: ಉಳಿ ಸೇವಾ ಸಹಕಾರಿ ಬ್ಯಾಂಕ್, ಉಳಿ–ಕಕ್ಯಪದವು ಇದರ ವತಿಯಿಂದ ವಾರ್ಷಿಕ ಮಹಾಸಭೆಯ ಪ್ರಯುಕ್ತ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಕ್ಕೆ ವಿವಿಧ ಸೇವಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಹಾರೆಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕಿನ ಲೆಕ್ಕಪರಿಶೋಧಕ ಯತ ಗುರುಪ್ರಕಾಶ್, ಸಿಬ್ಬಂದಿ ಪ್ರಹ್ಲಾದ್, ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಹಾಗೂ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ವಿಂದ್ಯಾಶ್ರೀ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯಡಿ ಹಮ್ಮಿಕೊಳ್ಳುವ ಸ್ವಚ್ಛತಾ ಅಭಿಯಾನ, ಪರಿಸರ ಸಂರಕ್ಷಣೆ ಹಾಗೂ ಶ್ರಮದಾನ ಕಾರ್ಯಕ್ರಮಗಳಿಗೆ ಈ ಉಪಕರಣವು ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ ಉಳಿ ಸೇವಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸದಸ್ಯರಿಗೆ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *