Breaking
20 Nov 2026, Fri

ಬೈಂದೂರು ರೈಲು ನಿಲ್ದಾಣದಲ್ಲಿ ಮೊಬೈಲ್ ಕಳವು: ಆರೋಪಿ ಬಂಧನ, ಹಲವು ಮೊಬೈಲ್‌ಗಳು ವಶಕ್ಕೆ

ಬೈಂದೂರು: ಮಂಗಳೂರಿನಿಂದ ಮಡಗಾಂವ್‌ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ ಅನ್ನು ಬೈಂದೂರು ರೈಲು ನಿಲ್ದಾಣದಲ್ಲಿ ಕಳವು ಮಾಡಿ, ಅದರ ಮೂಲಕ ಹಣ ವರ್ಗಾಯಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಸಾಸ್ತಾನ ಗೋಳಿಬೆಟ್ಟುವಿನ ಪ್ರಹ್ಲಾದ್ (32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಬೈಂದೂರು ವೃತ್ತದ ಪೊಲೀಸ್ ನಿರೀಕ್ಷಕ ಶಿವಕುಮಾರ್ ಬಿ. ಅವರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯ ಬಳಿಯಿಂದ ಕೆಲವು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *