Breaking
20 Nov 2026, Fri

ಸುರತ್ಕಲ್‌ನಲ್ಲಿ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ನುಗ್ಗಿ ಪಾದಚಾರಿಗೆ ಡಿಕ್ಕಿ: ಯುವಕನಿಗೆ ಗಾಯ

ಸುರತ್ಕಲ್: ಉಡುಪಿಯಿಂದ ಮಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ಕಾರೊಂದು ಸುರತ್ಕಲ್ ಸಮೀಪ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಗೆ ನುಗ್ಗಿ ಪಾದಚಾರಿ ಯುವಕನಿಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.

ಘಟನೆಯಲ್ಲಿ ನಿಖಿಲ್ ಎಂಬ ಯುವಕ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *