ಬೆಳ್ತಂಗಡಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರ ಪ್ರದೇಶಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಪ್ರದೇಶದ ವಿವಿಧ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಅಗತ್ಯತೆ ಹಾಗೂ ಸ್ಥಳೀಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಅವರ ಗಮನಕ್ಕೆ ತಂದರು.

ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ರಕ್ಷಿತ್ ಶಿವರಾಂ ಅವರು, ಸಮಸ್ಯೆಗಳ ಪರಿಹಾರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಾರ್ಯ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷೆ ಉಷಾ ಶರತ್, ತಣ್ಣೀರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯವಿಕ್ರಂ, ತೆಕ್ಕಾರು ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಜಾಕ್ ತೆಕ್ಕಾರು, ಊರಿನ ಪ್ರಮುಖರಾದ ಉಮೇಶ್ ಗೌಡ, ಜಯರಾಜ್ ಗೌಡ, ರವಿ ಗೌಡ, ರವೀಂದ್ರ ಗೌಡ, ರಾಮಚಂದ್ರ ಗೌಡ, ಯುವರಾಜ್ ಗೌಡ, ಸತೀಶ್ ಗೌಡ, ವಿಶ್ವನಾಥ ಗೌಡ, ಕರುಣಾಕರ ಗೌಡ, ಭವಾನಿ ಅಜಿರಾ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.



