Breaking
21 Nov 2026, Sat

ಗಡಿಪಾರಿಗೊಳಗಾದ ನರಸಿಂಹ ಮಾಣಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಗಡಿಪಾರು ಕ್ರಮಕ್ಕೆ ಒಳಗಾಗಿರುವ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ನರಸಿಂಹ ಮಾಣಿ ಅವರ ಗಡಿಪಾರು ಕ್ರಮದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬದವರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಇದೇ ವೇಳೆ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಹ ಸಂಚಾಲಕ ಪ್ರಸನ್ನ ದರ್ಬೆ, ಪ್ರಮುಖರಾದ ಅಜಿತ್ ಹೊಸಮನೆ, ಪುತ್ತೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ್ ಶೆಟ್ಟಿ, ಕಾರ್ಯದರ್ಶಿ ಪ್ರೀತಂ ಪೆರ್ನೆ, ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ರಾಜೇಶ್, ವಿಶ್ವನಾಥ್ ಕುಲಾಲ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *