ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಜನಾಂದೋಲನದ ಅಂಗವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು.

ನ.20ರಂದು ಬಂದಾರು ಮುಖ್ಯ ಪೇಟೆಯಲ್ಲಿ ಕಾಲ್ನಡಿಗೆ ಜಾಥಾದ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಜಿಲ್ಲಾ ಸಹಪ್ರಭಾರಿ ಜಯಂತ್ ಕೋಟ್ಯಾನ್ ಅವರು ರಾಜ್ಯ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಮನ್ ಕೀ ಬಾತ್ ಸಂಚಾಲಕ ಸೀತಾರಾಮ್ ಬೆಳಾಲು ಅವರು ನೆರೆದಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಬಂದಾರು ಪಂಚಾಯತ್ ಪ್ರಭಾರಿ, ಯುವ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ ನಾಗದೋಂಡಿ ಪೆರ್ಲ-ಬೈಪಾಡಿ, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಡಿ.ಕೆ. ಕಡಮ್ಮಾಜೆ ಫಾರ್ಮ್ಸ್, ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರಗಳ ಪ್ರಮುಖರಾದ ದಿನೇಶ್ ಗೌಡ ಖಂಡಿಗ ಹಾಗೂ ಗಂಗಾಧರ ಪೂಜಾರಿ ದಂಬೆತ್ತಿಮಾರು ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಪದ್ಮುಂಜ ಸಿಎ ಬ್ಯಾಂಕ್ ನಿರ್ದೇಶಕ ಹಾಗೂ ಯುವ ವಕೀಲ ಉದಯ್ ಕುಮಾರ್ ಬಿ.ಕೆ. ಕಾರ್ಯಕ್ರಮ ನಿರೂಪಿಸಿದರು.





