ಉಜಿರೆ ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಿರಿಯಾಡಿ–ಭೀಮಗುಡ್ಡೆ–ಅರಳಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು. ರೂ.20 ಲಕ್ಷ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಶಕ್ತಿ ಕೇಂದ್ರದ ಪ್ರಮುಖರಾದ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ, ಉಜಿರೆ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಉಪಸ್ಥಿತರಿದ್ದರು.

ಬೂತ್ ಅಧ್ಯಕ್ಷರಾದ ದೇವಪ್ಪ ಗೌಡ ಸಾಯಿಕೃಪಾ, ಅಶ್ವಿನಿ ಬಂಗೇರ, ಕಾರ್ಯದರ್ಶಿಗಳಾದ ಪರಮೇಶ್ವರ ಗೌಡ ಅರಳಿ, ದಿನೇಶ್ ಗಾಂಧಿನಗರ, ದೇವಸ್ಥಾನದ ಆಡಳಿತ ಮುಕ್ತೇಸರ ವಾಸುದೇವ ಸಂಪಿಗೆತ್ತಾಯ, ಬ್ರಹ್ಮಕಲಶದ ಕಾರ್ಯಾಧ್ಯಕ್ಷ ಮಧುಸೂದನ್, ಗಿರಿರಾಜ ಬಾರಿತ್ತಾಯ, ರಮೇಶ್ ಮಯ್ಯ, ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.




