ಪದ್ಮುಂಜ: ರಾಜ್ಯ ಕಾಂಗ್ರೆಸ್ ಸರಕಾರದ ನೀತಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ನ.23ರ ಸೋಮವಾರ ಬೆಳಗ್ಗೆ 11.30ಕ್ಕೆ ಪದ್ಮುಂಜದಲ್ಲಿ ಜನಾಂದೋಲನ ಪ್ರತಿಭಟನಾ ಸಭೆ ನಡೆಯಲಿದೆ.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಸತಿ ಯೋಜನೆ ಹಾಗೂ ರೈತರ ಬೆಳೆ ವಿಮೆ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ಶಾಸಕರು, ರಾಜ್ಯ, ಜಿಲ್ಲಾ ಹಾಗೂ ಬೆಳ್ತಂಗಡಿ ಮಂಡಲದ ಪ್ರಮುಖರು ಭಾಗವಹಿಸಲಿದ್ದಾರೆ. ಬಳಿಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರ ಮೂಲಕ ಮನವಿ ಸಲ್ಲಿಸಲಾಗುವುದು.
ಕಣಿಯೂರು ಪಂಚಾಯತ್ ವ್ಯಾಪ್ತಿಯ ನಾಗರಿಕರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




