ಬೆಳ್ತಂಗಡಿ: ರೂ.50 ಲಕ್ಷ ವೆಚ್ಚದಲ್ಲಿ ಕೊಕ್ರಾಡಿ–ಕುತ್ಲೂರು ಸಂಪರ್ಕ ರಸ್ತೆಯ ಅತ್ರಿಜಾಲು ಎಂಬಲ್ಲಿ ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಕೊಕ್ರಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.





