ಪದ್ಮುಂಜ: ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಜನಾಂದೋಲನ ಪ್ರತಿಭಟನೆ ನ.23ರಂದು ನಡೆಯಿತು.
ಪದ್ಮುಂಜ ಮುಖ್ಯಪೇಟೆಯಲ್ಲಿ ಕಾಲ್ನಡಿಗೆ ಜಾಥಾದ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ರಾಜ್ಯ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಿದರು.

ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ ಮಡಂತ್ಯಾರು, ಜಿಲ್ಲಾ ಮನ್ ಕೀ ಬಾತ್ ಸಂಚಾಲಕ ಸೀತಾರಾಮ್ ಬೆಳಾಲು ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ ಪೆರ್ಲ-ಬೈಪಾಡಿ ಅವರು ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದ ನೀತಿಗಳು ಹಾಗೂ ವಿವಿಧ ಯೋಜನೆಗಳ ವಿಚಾರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಸಹಪ್ರಭಾರಿ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುನಿಲ್ ಅನವು, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಉರುವಾಲು ಶಕ್ತಿ ಕೇಂದ್ರದ ಪ್ರಮುಖ ಕೃಷ್ಣಪ್ರಸಾದ್ ಮಜಿಕುಡೇಲ್ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಕಣಿಯೂರು ಶಕ್ತಿ ಕೇಂದ್ರದ ಪ್ರಮುಖ ಹಾಗೂ ಯುವ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರತಿಭಟನಾಕಾರರು ಕಣಿಯೂರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.



